‘ಮನೆಯಿಂದಲೇ ಕಲಿಯಿರಿ ನಿಮ್ಮಿಷ್ಟದ ಭಾಷೆ’19-02-2018

ಮೈಸೂರು: ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ 17 ಭಾಷೆಗಳಲ್ಲಿ ಮಕ್ಕಳಿಗಾಗಿ ಹೊರ ತಂದಿರುವ ಬಾಲ ರಾಮಾಯಣ ಪುಸ್ತಕವನ್ನು ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಭಾಷೆ ಒಂದು ಸಂಪರ್ಕ ಸಾಧನವಾಗಿದ್ದು ದೇಶದಲ್ಲಿ 22 ಅಧಿಕೃತ ಭಾಷೆಗಳಿವೆ, ಅವುಗಳ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದರು. ಉತ್ತಮ ಕಾರ್ಯಗಳಿಗೆ ಸರ್ಕಾರದ ಬೆಂಬಲವಿದೆ. ಭಾಷಾ ಕೇಂದ್ರ ತನ್ನದೇ ಆದ ಸ್ವಂತ ಕಟ್ಟಡ ಹೊಂದಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಅವರು ಹೇಳಿದರು.

ದೇಶದ ಎಲ್ಲಾ ಭಾಷೆಗಳ ಅಭಿವೃದ್ಧಿಗೆ ಪರಿಣಿತರ ಕಾರ್ಯಾಗಾರ ಏರ್ಪಡಿಸಿ ಸಲಹೆ ಸೂಚನೆ ಪಡೆದು ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆಯಿದೆ ಎಂದು ಸಚಿವರು ತಿಳಿಸಿದರು. “ಸ್ವಯಂ” ಎಂಬ ಆನ್‍ಲೈನ್ ಕಾರ್ಯಕ್ರಮದ ಮೂಲಕ ಮನೆಯಲ್ಲಿದ್ದುಕೊಂಡೆ ಇಚ್ಛೆ ಪಟ್ಟ ಭಾಷೆ ಕಲಿಯಲು ಅನುವು ಮಾಡಿಕೊಡಲಾಗುತ್ತಿದೆ. ಈಗಾಗಲೇ 20 ಲಕ್ಷಕ್ಕೂ ಹೆಚ್ಚು ಮಂದಿ ಈ ಕೋರ್ಸ್‍ಗಳಿಗೆ ನೊಂದಾಯಿಸಿಕೊಂಡಿದ್ದಾರೆ ಎಂದು ಜಾವಡೇಕರ್ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Prakash Javadekar course ಸರ್ಕಾರ 'ಸ್ವಯಂ'


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ