ಹಾಡಹಗಲೇ ಪೆಟ್ರೋಲ್ ಬಂಕ್ ನಲ್ಲಿ ದರೋಡೆ

huge money robbed at petrol bunk

20-02-2018

ಬೆಂಗಳೂರು: ನಗರದಲ್ಲಿ ಹಾಡ ಹಗಲೇ ಪೆಟ್ರೋಲ್ ಬಂಕ್ ಗೆ ನುಗ್ಗಿ 19 ಲಕ್ಷ ರೂ.ದರೋಡೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಂಕ್  ಮ್ಯಾನೇಜರ್ ಗೆ ಪೆಪ್ಪರ್ ಸ್ಪ್ರೇ ಹೊಡೆದು, ಲಾಂಗು ಮಚ್ಚುಗಳಿಂದ ಬೆದರಿಸಿ ಈ ಕೃತ್ಯ ಎಸಗಿದ್ದಾರೆ. ಆರ್.ಆರ್.ನಗರದ ಹೆಚ್.ಪಿ ಪೆಟ್ರೋಲ್ ಬಂಕ್ ನಲ್ಲಿ ನಿನ್ನೆ ಬೆಳಿಗ್ಗೆ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಏಕಾಏಕಿ ಪೆಟ್ರೋಲ್ ಬಂಕ್ಗೆ ನುಗ್ಗಿದ ದುಷ್ಕರ್ಮಿಗಳು ಮ್ಯಾನೇಜರ್ ಮೇಲೆ ಹಲ್ಲೆ ಮಾಡಿ ಹಣ ಕಸಿದುಕೊಂಡ ಪರಾರಿಯಾಗಿದ್ದಾರೆ. ಈ ಕುರಿತು ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

pepper spray petrol Bank ಹಗಲು ಪರಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ