ಎಚ್ಚೆತ್ತ ಜಗದೀಶ್ ಶೆಟ್ಟರ್

Jagadish Shettar blame congress

20-02-2018

ಬೆಂಗಳೂರು: ವಿಧಾನಸಭೆಯ ವಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಶಾಸಕ ಹ್ಯಾರಿಸ್ ಮಗ ಮೊಹಮದ್ ನಲಪಾಡ್ ನ ಗೂಂಡಾಪಡೆ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ, ಶಾಂತಿನಗರ ಅಶಾಂತಿನಗರವಾಗಿದೆ ಎಂದು ಶೆಟ್ಟರ್ ಕಾಂಗ್ರೆಸ್ ವಿರುದ್ಧ  ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಗೂಂಡಾ ರಾಜ್, ರಾಕ್ಷಸೀ ಆಡಳಿತ ನಡೆಯುತ್ತಿದೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿ ಸುಡುವ ಪ್ರಯತ್ನ ಮಾಡಿದ್ದಾರೆ, ಬ್ಯಾಟರಾಯನಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಆಗಿದೆ, ಇಷ್ಟೆಲ್ಲ ನಡೆಯುತ್ತಿದ್ದರೂ ಸಿದ್ದರಾಮಯ್ಯ ಸರ್ಕಾರ ಕಣ್ಮಿಚ್ಚಿ ಕುಳಿತಿದೆ ಎಂದು ಶೆಟ್ಟರ್ ದೂರಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ