ಬೇಜವಾಬ್ದಾರಿ ರಾಜಕಾರಣದ ಆರೋಪ…

siddaramaiah challenged modi to release proper documents

20-02-2018

ಬೆಂಗಳೂರು: ಪ್ರಧಾನಿ ಮೋದಿಯವರು ದೇಶ, ರಾಜ್ಯ ಹಾಗೂ ಕೃಷಿಕರ ಸಮಸ್ಯೆಗಳ ಬಗ್ಗೆ ತಮ್ಮ ಭಾಷಣದಲ್ಲಿ ಮಾತನಾಡಲಿಲ್ಲ, ಜೈಲಿಗೆ ಹೋದ ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಕೆಂಡ ಕಾರಿದ ಸಿದ್ದರಾಮಯ್ಯ, ಮೋದಿಯವರು ಬೇಜವಾಬ್ದಾರಿಯ ಹಾಗೂ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ 11 ಸಾವಿರ ಕೋಟಿ ರೂ. ಮೋಸ ಮಾಡಿ ಪಲಾಯನ ಮಾಡಿದ್ದಾರೆ, ಇವರ ಕುಮ್ಮಕ್ಕಿಲ್ಲದೇ ಓಡಿ ಹೋಗಿದ್ದಾರಾ ? ಎಂದು ಪ್ರಶ್ನಿಸಿದ ಸಿಎಂ ಇವರನ್ನು ಓಡಿ ಹೋಗಲು ಬಿಟ್ಟಿದ್ದೇ ಬಿಜೆಪಿಯವರು ಎಂದು ಆರೋಪಿಸಿದರು.

ರಾಜ್ಯ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದು ಟೀಕಿಸಿರುವ ಪ್ರಧಾನಿ ಮೋದಿ ಅವರಿಗೆ ದೇಶದ, ರಾಜ್ಯದ ಸಮಸ್ಯೆಗಳು ಕಾಣುತ್ತಿಲ್ಲ. ಸಾಲ ಮನ್ನಾ, ರೈತರ ಸಮಸ್ಯೆ, ಇತರೆ ಸಮಸ್ಯೆಗಳ ಬಗ್ಗೆ ಮಾತನಾಡದೇ ಕೇವಲ ಕಮಿಷನ್ ವಿಚಾರ ಮಾತ್ರ ಪ್ರಸ್ತಾಪ ಮಾಡಿದ್ದಾರೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ. ಕಮಿಷನ್ ಬಗ್ಗೆ ಮಾಹಿತಿ ಇದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. ಅತಿ ಹೆಚ್ಚು ಕಮಿಷನ್ ವ್ಯವಹಾರ ನಡೆದಿರುವುದು ಯಡಿಯೂರಪ್ಪ ಅವಧಿಯಲ್ಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Siddaramaiah yeddyurappa ರಾಜ್ಯ ಸರ್ಕಾರ ಕಮಿಷನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ