ಗೃಹ ಸಚಿವರ ಸಮರ್ಥನೆ

Home Minister

20-02-2018

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂದು, ವಿಧಾನಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹ್ಯಾರಿಸ್ ಪುತ್ರನ ವಿರುದ್ಧದ ಹಲ್ಲೆ ಪ್ರಕರಣದ ಬಗ್ಗೆ ಶೆಟ್ಟರ್ ಪ್ರಶ್ನೆಗಳಿಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಯುಬಿ ಸಿಟಿಯಲ್ಲಿ ನಡೆದ ಘಟನೆ ಸಂಬಂಧ ನಲಪಾಡ್ನನ್ನು ಬಂಧಿಸಿ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದೇವೆ ಎಂದರು. ಮಾಧ್ಯಮದವರ ಮೇಲೆ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸಚಿವರು ಸಮರ್ಥಿಸಿಕೊಂಡರು.


ಸಂಬಂಧಿತ ಟ್ಯಾಗ್ಗಳು

Ramalinga Reddy Legislative Assembly ಸಮರ್ಥ ಕರ್ತವ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ