ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭ

Viewer Committee submitted report to kpcc

20-02-2018

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರ ಸಂಬಂಧ ಕ್ಷೇತ್ರವಾರು ಸಮೀಕ್ಷೆ ನಡೆಸಿರುವ ವೀಕ್ಷಕ ಸಮಿತಿ ವರದಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಕೈ ತಲುಪಿದೆ. ರಾಜ್ಯದ ಎಲ್ಲ 224 ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಕುರಿತ ಈ ವರದಿಯನ್ನು ಕೆಪಿಸಿಸಿ ಆಯ್ಕೆ ಸಮಿತಿ ಮುಂದೆ ಮಾರ್ಚ್ 2ನೇ ವಾರದಲ್ಲಿ ವರದಿ ಮಂಡನೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್ ಮತ್ತು ಎಸ್.ಆರ್.ಪಾಟೀಲ್ ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ,ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಂಡಿಸ್, ಹರಿಪ್ರಸಾದ್, ಅಲ್ಲಮ್ ವೀರಭದ್ರಪ್ಪ ಸೇರಿದಂತೆ 45 ಮಂದಿ ಇರುವ ಸಭೆಯಲ್ಲಿ ಈ ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಆನಂತರ, ಏಪ್ರಿಲ್ ಮೊದಲ ವಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ವರದಿ ಸಲ್ಲಿಸಲಾಗುವುದು. ಈ ವರದಿಯಲ್ಲಿ ಕ್ಷೇತ್ರವೊಂದಕ್ಕೆ ಕನಿಷ್ಟ ಒಬ್ಬರು ಹಾಗೂ ಗರಿಷ್ಠ ಐದು ಮಂದಿ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಿದ್ದು, ಎಐಸಿಸಿ ಚುನಾವಣಾ ಸಮಿತಿಯವರು ಏಪ್ರಿಲ್ 2ನೇ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆ ಮಾಡುವ ಸಾಧ್ಯತೆಗಳಿವೆ.


ಸಂಬಂಧಿತ ಟ್ಯಾಗ್ಗಳು

KPCC G.Parameshwara ಅಭ್ಯರ್ಥಿ ಘೋಷಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ