ಕಾಂಗ್ರೆಸ್ ಮುಖಂಡನ ಗೂಂಡಾ ವರ್ತನೆ..!

congress leader goonda behavior in BBMP office

20-02-2018

ಬೆಂಗಳೂರು: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಗೂಂಡಾಗಿರಿ ವರ್ತನೆ ತೋರಿದ ಬೆನ್ನಲ್ಲೆ ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಸರ್ಕಾರಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ ಗೂಂಡಾ ವರ್ತನೆ ತೋರಿ ಅಧಿಕಾರಿಗಳು ನೌಕರರನ್ನು ಬೆದರಿಸಿರುವುದು ಬಯಲಾಗಿದೆ.

ಶಾಸಕ ಭೈರತಿ ಬಸವರಾಜ್ ಅವರ ಅಪ್ತ  ಜಲಮಂಡಳಿ ಸದಸ್ಯ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ಬಂದು ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿ ಗೂಂಡಾ ವರ್ತನೆ ತೋರಿದ್ದಾರೆ.

ಅಕ್ರಮ ಜಮೀನಿಗೆ ಖಾತೆ ಮಾಡಿಕೊಡುವಂತೆ ಅಧಿಕಾರಿಗೆ ಒತ್ತಡ ಹಾಕಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿ ಒಳಗೆ ಪೆಟ್ರೋಲ್ ಸುರಿದಿದ್ದು, ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭೈರತಿ ಬಸವರಾಜ್ ಕೃಪಾಕಟಾಕ್ಷದಿಂದ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ, ಬಿಬಿಎಂಪಿ ಕಚೇರಿಗೆ ಅಧಿಕಾರಿ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ.

ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನೂ ಆಗಿರುವ ನಾರಾಯಣಸ್ವಾಮಿ ಎನ್‍ಆರೈ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರೊ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಿರಲಿಲ್ಲ. ಎರಡು ದಿನಗಳ ಹಿಂದೆ ನಾರಾಯಣಸ್ವಾಮಿ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ