‘ಭ್ರಷ್ಟಾಚಾರ ಮಿತಿಮೀರಿದೆ’- ಅಮಿತ್ ಷಾ20-02-2018

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಸೂತ್ರ ಹಿಡಿಯಲಿದ್ದು, ಈ ಗೆಲುವು ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಹೆಬ್ಬಾಗಿಲಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣಾ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿರುವ ಅವರು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಬಿಜೆಪಿ ನವಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯದ ಜನತೆ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಬೇಸತ್ತಿದ್ದು, ಬದಲಾವಣೆ ಬಯಸಿರುವುದು ಸ್ಪಷ್ಟವಾಗಿದೆ ಎಂದರು.

ಬರಲಿರುವ ರಾಜ್ಯ ಚುನಾವಣೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ರಾಷ್ಟ್ರ ರಾಜನೀತಿಯಲ್ಲೂ ಬಹಳ ಮಹತ್ವಪೂರ್ಣವಾದ ಚುನಾವಣೆ. ಇತರ ರಾಜಕೀಯ ಪಕ್ಷಗಳು ಚುನಾವಣೆ ಸಮೀಪಿಸಿದಾಗ ಮಾತ್ರ ಕಾರ್ಯಪ್ರವೃತ್ತವಾಗುತ್ತವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಅಭ್ಯುದಯಕ್ಕಾಗಿ ನಿರಂತರ ದುಡಿಯುತ್ತಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

amit shah conference ಚುನಾವಣೆ ವಿವೇಕಾನಂದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ