ಕಾಂಗ್ರೆಸ್ ನಿಂದ ನಾರಾಯಣಸ್ವಾಮಿ ಉಚ್ಛಾಟನೆ

Narayanaswamy was expelled from the Congress

20-02-2018

ಬೆಂಗಳೂರು: ಕಾಂಗ್ರೆಸ್ ನಾಯಕ ಭೈರತಿ ನಾರಾಯಣಸ್ವಾಮಿ ಅವರನ್ನು ಪಕ್ಷದಿಂದ ಆರು ವರ್ಷ ಅವಧಿಗೆ ಉಚ್ಛಾಟಿಸಲಾಗಿದೆ. ಕಳೆದ ಶನಿವಾರ ಬೆಂಗಳೂರು ಮಹಾನಗರಪಾಲಿಕೆ ಅಧಿಕಾರಿಯೊಬ್ಬರಿಗೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈ ಕ್ರಮ ಕೈಗೊಂಡಿದ್ದಾರೆ.

ವಿಧಾನಮಂಡಲದ ಉಭಯ ಸದನಗಳಲ್ಲಿಂದು ಈ ವಿಷಯ ಪ್ರತಿಧ್ವನಿಸಿ, ನಾರಾಯಣಸ್ವಾಮಿ ಬಂಧನಕ್ಕೆ ಪ್ರತಿಪಕ್ಷ ನಾಯಕರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು ರಾಜ್ಯದಲ್ಲಿ ಕಾನೂನಿನ ಎದುರು ಎಲ್ಲರೂ ಸಮಾನರು, ನಾರಾಯಣಸ್ವಾಮಿ ಬಂಧನಕ್ಕೆ ನಗರ ಪೊಲೀಸ್ ಆಯುಕ್ತರಿಗೆ ತಾವು ಈಗಾಗಲೇ ಆದೇಶಿಸಿರುವುದಾಗಿ ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

BBMP congress ಆಯುಕ್ತ ಪರಮೇಶ್ವರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ