‘ಕೇಂದ್ರದ ಮೇಲೆ ಒತ್ತಡ ತರಲು ಸಹಕರಿಸಿ’20-02-2018

ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿದ ಪ್ರಮಾಣದಲ್ಲಿ ರಾಜ್ಯದಲ್ಲಿ ತೊಗರಿ ಖರೀದಿ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಪ್ರಮಾಣದ ಖರೀದಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ ನಾಯಕರು ಸಹಕರಿಸಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚು ತೊಗರಿ ಇಳುವರಿ ಬಂದಿದ್ದು ಈಗಾಗಲೇ 26 ಲಕ್ಷ ಟನ್ ತೊಗರಿಯನ್ನು ಕೇಂದ್ರ ಸರ್ಕಾರದ 5 ಸಾವಿರದ 500 ರೂಪಾಯಿ ಹಾಗೂ ರಾಜ್ಯ ಸರ್ಕಾರದ 450 ರೂಪಾಯಿ ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿದೆ. ಶೇಕಡ 40ರಷ್ಟು ಖರೀದಿ ಪೂರ್ಣಗೊಂಡಿದ್ದು, ಈಗ ಖರೀದಿಯನ್ನು ನಿಲ್ಲಿಸಲಾಗಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

T. B. Jayachandra session ಸರ್ಕಾರ ಖರೀದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ