ಬ್ಯಾಂಕ್ ದರೋಡೆಗೆ ಯತ್ನ

Attempt to bank robbery

21-02-2018

ತುಮಕೂರು: ಕುಣಿಗಲ್ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ನ ಕಿಟಕಿ ಮುರಿದು ಬ್ಯಾಂಕ್ ಗೆ ನುಗ್ಗಿ ಹಣ ದೋಚಲು ವಿಫಲ ಯತ್ನ ನಡೆಸಿದ್ದಾರೆ. ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬೆಳಿಗ್ಗೆ ಬ್ಯಾಂಕಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಎಎಸ್ಪಿ ಶೋಭಾರಾಣಿ ಭೇಟಿ ಪರಿಶೀಲನೆ ನಡೆಸಿದರು. ಬ್ಯಾಂಕ್ ನ ಸಿಸಿ ಕ್ಯಾಮೆರಾ ಸಂಪರ್ಕ ಕಡಿತ ಗೊಳಿಸಿ ಕೃತ್ಯ ಎಸಗಿರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bank robbery CCTV ಎಎಸ್ಪಿ ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ