ಕೆರೆಗಳ ಅಭಿವೃದ್ಧಿಗೆ ಆದ್ಯತೆ

21-02-2018
ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಕೆರೆಗಳನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಲೀನಗೊಳಿಸುವ ಸಂಬಂಧ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಟಿ.ಬಿ.ಜಯಚಂದ್ರ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ರಾಜ್ಯದಲ್ಲಿ ಎಲ್ಲ ಕೆರೆಗಳನ್ನೂ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ತರಲಾಗುವುದು ಎಂದು ರಘುನಾಥ್ ರಾವ್ ಮಲ್ಕಾಪುರೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿರುವ ಬಹುತೇಕ ಕೆರೆಗಳು ಒತ್ತುವರಿಯಾಗಿವೆ, ಅವುಗಳ ಸಂರಕ್ಷಣೆ, ಕೆರೆಗಳಲ್ಲಿರುವ ಹೂಳು ಎತ್ತುವುದೂ ಸೇರಿದಂತೆ ಹಲವು ಅಭಿವೃದ್ಧಿ ಕ್ರಮಗಳನ್ನು ಕೈಗೆತ್ತಿಕೊಳ್ಳಲು 60 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಒಂದು ಕಮೆಂಟನ್ನು ಹಾಕಿ