ಜನ ಸೇವೆಗೆ ‘ಕುಮಾರ ವಾಹನ’22-02-2018

ಬೆಂಗಳೂರು: ‘ಕುಮಾರ ರಕ್ಷಾ ಜನಸೇವಾ’ ಹೆಸರಿನ ವಾಹನವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಸರಿನಲ್ಲಿ ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಒದಗಿಸಲಾಗಿದೆ. ಈ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಕುಮಾರಸ್ವಾಮಿ, ‘ಜೆಡಿಎಸ್ ಪಕ್ಷ ಸದಾ ಬಡವರು, ದೀನದಲಿತರ ಏಳಿಗೆಗಾಗಿ ದುಡಿಯುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನತಾ ದರ್ಶನಕ್ಕೆ ಬರುತ್ತಿದ್ದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಾವಿರಾರು ಬಡವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸರಕಾರ ಮತ್ತು ಪಕ್ಷದ ವತಿಯಿಂದ ನೆರವಾಗಿದ್ದೇವೆ. ಇದನ್ನು ನಮ್ಮ ಜನರು ಮರೆತಿಲ್ಲ. ಅಧಿಕಾರ ಇರಲಿ, ಇಲ್ಲದಿರಲಿ ಬಡಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವುದೇ ಮಾನವೀಯತೆ. ಹೀಗಾಗಿ, ಇಂತಹ ಕಾರ್ಯಕ್ರಮಗಳನ್ನು ನಾವು ಮತ್ತು ನಮ್ಮ ಪಕ್ಷ ಇನ್ನೂ ಹೆಚ್ಚು ಮಾಡುವ ಮೂಲಕ ಬಡ ವರ್ಗದ ಜನರ ನೆರವಿಗೆ ಧಾವಿಸುತ್ತೇವೆ’ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy kumara raksha ಆರೋಗ್ಯ ಜನತಾ ದರ್ಶನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ