ಚಿತ್ರನಟ ಮನೋಜ್ ತಿವಾರಿ ಅವರ ನಿವಾಸದ ಮೇಲೆ ದುಷ್ಕರ್ಮಿಗಳಿಂದ ದಾಳಿ

Kannada News

01-05-2017

ನವದೆಹಲಿ :- ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಚಿತ್ರನಟ ಮನೋಜ್ ತಿವಾರಿ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು , ಕೆಲವು ಕಿಡಿಗೇಡಿಗಳು ನನ್ನ ಏಳಿಗೆ ಸಹಿಸದೆ ಈ ದುಷ್ಕ್ರುತ್ಯ ನಡೆಸಿದ್ದಾರೆ ಎಂದು ತಿವಾರಿ ಆರೋಪಿಸಿದ್ದಾರೆ.  ನಿನ್ನೆ ರಾತ್ರಿ ಮನೆಗೆ ನುಗ್ಗಿದ 8 ಮಂದಿ ದುಷ್ಕರ್ಮಿಗಳಿದ್ದ ತಂಡ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ತಿವಾರಿಯವರ ಮನೆಗೆ ನುಗ್ಗಿ ಮನೆಯಲ್ದಿದ್ದ ಸಿಬ್ಬಂದಿಗಳು ಹಾಗೂ ಕೆಲ ನಾಯಕರ ಮೇಲೆ ದಾಳಿ ಮಾಡಿದ್ದಾರೆಂದು ಎಂದು ಹೇಳಲಾಗಿದೆ. ಮನೆಗೆಲಸದವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಹಾನಿಗೊಳಿಸಿ ಪರಾರಿಯಾಗಿದ್ದಾರೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ