ಬಿಜೆಪಿ ಬಿಡಲ್ಲ-ತಿಪ್ಪಾರೆಡ್ಡಿ 

I will not leave BJP: Thippareddy

22-02-2018

ಚಿತ್ರದುರ್ಗ: ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ತರೆ ಎಳೆದಿದ್ದಾರೆ. ನಾನು ಕಾಂಗ್ರೆಸ್ ಸೇರುತ್ತೇನೆ ಎಂಬ ರೀತಿಯಲ್ಲಿ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಬಂದಿರುವ ವರದಿ ತಪ್ಪು ಎಂದು ಹೇಳಿರುವ ತಿಪ್ಪಾರೆಡ್ಡಿ, ನಾನು ಯಾವುದೇ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿಲ್ಲ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನನಗೆ ಮೋಸ ಮಾಡಿಲ್ಲ, ನಾನು ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರವೂ ನನಗೆ ಎಂಎಲ್ಸಿ ಟಿಕೆಟ್ ಕೊಟ್ಟರು. ಆದರೆ, ರಾಜಕೀಯ ಜೀವನದ ಆರಂಭದಲ್ಲಿ ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡದೆ ಮೋಸ ಮಾಡಿತ್ತು, ಆಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ, ನನಗೆ ಮೋಸ ಮಾಡಿದ ಪಕ್ಷಕ್ಕೆ ಸೇರುವ ಅಗತ್ಯ ಇಲ್ಲ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

election News papers ಅಭ್ಯರ್ಥಿ ಟಿಕೆಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ