ರಾಹುಲ್ ಗಾಂಧಿ ಯಾತ್ರೆ-2

Rahul gandhi election campaigns for 3 days in karnataka

22-02-2018

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ರಾಹುಲ್ ಗಾಂಧಿ ಪ್ರವಾಸ, ಇದೇ ತಿಂಗಳ 24ರಿಂದ 26ರವರೆಗೂ ನಡೆಯಲಿದೆ ಎಂದು, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಂಬೈ ಕರ್ನಾಟಕದಲ್ಲಿ ಮೂರು ದಿನಗಳ ಕಾಲ ಜನಾರ್ಶೀವಾದ ಯಾತ್ರೆ ಆಯೋಜಿಸಿದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಗಳ ನಿಗದಿತ ಸ್ಥಳಗಳಲ್ಲಿ ಸಮಾವೇಶ, ರೋಡ್ ಶೋ ಮತ್ತು ಕಾಂಗ್ರೆಸ್ ನಾಯಕರ ಜೊತೆ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ ಎಂದರು. ಇದೇ ವೇಳೆ, ಶಾಸಕ ಹ್ಯಾರಿಸ್ ಪುತ್ರನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಬಗ್ಗೆ ಗೊತ್ತಾದ ತಕ್ಷಣ ನಲಪಾಡ್ ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

G.Parameshwara Nalapad ಉಚ್ಛಾಟನೆ ಜನಾರ್ಶೀವಾದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ