ಪ್ರತಿಭಟನೆಗೆ ಮುಂದಾದ ಉಪನ್ಯಾಸಕರು

PUC lecturers protest..!

22-02-2018

ಬೆಂಗಳೂರು: ವೇತನ ತಾರತಮ್ಯ ನಿವಾರಿಸಲು ಆಗ್ರಹಿಸಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿರುವುದಾಗಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯಪುರ್ಲೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಿಸಲು 2011ನೇ ಸಾಲಿನಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಜಿ.ಕುಮಾರನಾಯಕ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಇದೇ ತಿಂಗಳ 26 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘಗಳು ನಿರ್ಧರಿಸಿದ್ದವು.

ಆದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸಲು ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಟ್ಟು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದೇವೆ ಎಂದರು. 2016ರಲ್ಲಿ ಸರ್ಕಾರ ಒಂದು ವಾರ್ಷಿಕ ವೇತನ ಬಡ್ತಿ ನೀಡಿ ಒಂದು ವರ್ಷದೊಳಗಾಗಿ ವೇತನ ತಾರತಮ್ಯ ಬಗೆಹರಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಕೊಟ್ಟ ಮಾತನ್ನು ತಪ್ಪಿದೆ ಎಂದು ಶ್ರೀಕಂಠೇಗೌಡ ಕಿಡಿಕಾರಿದರು.

 


ಸಂಬಂಧಿತ ಟ್ಯಾಗ್ಗಳು

lecturers wages ನೇತೃತ್ವ ಮುಷ್ಕರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ