ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆ

Many plan for farmers

22-02-2018

ವಿಧಾನ ಮಂಡಲದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಉತ್ತರದ ಮುಖ್ಯಾಂಶಗಳು:

►ಕೃಷಿ ಉತ್ಪನ್ನಗಳಿಗೆ ಸೂಕ್ತ ದರ ಒದಗಿಸಲು ಎಪಿಎಂಸಿಗಳಲ್ಲಿ ಏಕರೂಪ ಮಾರುಕಟ್ಟೆ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಆನ್ ಲೈನ್ ಪದ್ಧತಿ ಅಳವಡಿಸಿದ್ದೇವೆ. ಇದು ಕೇಂದ್ರದ ನೀತಿ ಆಯೋಗದಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ. 
►ರಾಜ್ಯದಲ್ಲಿ ರೈತರ ಆತ್ಮಹತ್ಯೆ ಆಗಿರುವುದು ನಿಜ. ಹಿಂದೆಯೂ ಆಗಿದೆ. ಭೀಕರ ಬರಗಾಲದ ಪರಿಣಾಮ ಆತ್ಮಹತ್ಯೆ ಪ್ರಕರಣಗಳು ಕೊಂಚ ಹೆಚ್ಚಾದವು. ಆದರೆ ಈ ವರ್ಷ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ.
►ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು,ನಮ್ಮ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತದೆ. ಹೀಗಾಗಿ, ಸಾವಿಗೆ ಶರಣಾಗಬೇಡಿ ಎಂದು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ಈ ಹಿಂದೆಯೂ ಮನವಿ ಮಾಡಿದ್ದೇನೆ. 
►ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಕುಟುಂಬದವರಿಗೆ ನೀಡುವ ಪರಿಹಾರ ಐದು ಲಕ್ಷಕ್ಕೆ ಹೆಚ್ಚಿಸಿದ್ದೇವೆ. ಮಾಸಿಕ ಪಿಂಚಣಿಯಾಗಿ ಎರಡು ಸಾವಿರ ನೀಡುತ್ತಿದ್ದೇವೆ. ಮಕ್ಕಳಿಗೆ ಶಿಕ್ಷಣ, ಕುಟುಂಬದವರಿಗೆ ಆರೋಗ್ಯ ಸೌಲಭ್ಯ ನೀಡುತ್ತಿದ್ದೇವೆ.
►ಕೃಷಿ ಭಾಗ್ಯ ಯೋಜನೆಯಲ್ಲಿ 1.92 ಲಕ್ಣ  ಕೃಷಿ ಹೊಂಡ ನಿರ್ಮಾಣ ಮಾಡಿದ್ದೇವೆ. ಇದಕ್ಕಾಗಿ 1920 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಇದು ಅತ್ಯಂತ ಜನಪ್ರಿಯ ಯೋಜನೆಯಾಗಿದೆ.
►70 ಲಕ್ಷ ರೈತರಿಗಾಗಿ ರೈತ ಬೆಳಕು ಯೋಜನೆ ಜಾರಿಗೆ ತರುತ್ತಿದ್ದೇವೆ. ಒಣಭೂಮಿ ಬೇಸಾಯ ಮಾಡುವವರಿಗೆ ಇದರಿಂದ ಅನುಕೂಲ ಆಗಲಿದೆ. ಇದರ ವಾರ್ಷಿಕ ವೆಚ್ಚ ಮೂರೂವರೆ ಸಾವಿರ ಕೋಟಿ ರೂಪಾಯಿ. ತೆಲಂಗಾಣದ ಬಳಿಕ ಇಂತಹ ಯೋಜನೆ ಜಾರಿಗೆ ತಂದ ಎರಡನೇ ರಾಜ್ಯ ಕರ್ನಾಟಕ. ಈ ಯೋಜನೆಯಲ್ಲಿ ಐದು ಸಾವಿರದಿಂದ ಹತ್ತು ಸಾವಿರ ರೂಪಾಯಿ ವರೆಗಿನ ಪ್ರೋತ್ಸಾಹ ಧನ ರೈತರಿಗೆ ಸಿಗಲಿದೆ.


ಸಂಬಂಧಿತ ಟ್ಯಾಗ್ಗಳು

siddaramaiah Governor ಪ್ರೋತ್ಸಾಹ ತೆಲಂಗಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ