ನೀರಾವರಿಗೆ 58 ಸಾವಿರ ಕೋಟಿ ರೂ. ಅನುದಾನ

Rs 58,000 crore for irrigation projects

22-02-2018

ವಿಧಾನ ಮಂಡಲದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಉತ್ತರದ ಮುಖ್ಯಾಂಶಗಳು: 

►ನಮ್ಮ ಸರ್ಕಾರ ನೀರಾವರಿಗೂ ಹೆಚ್ಚು ಅನುದಾನ ಒದಗಿಸುವ ಜೊತೆಗೆ ಕೆರೆಗಳನ್ನು ತುಂಬಿಸುತ್ತಿದ್ದೇವೆ. 2,600 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಲು ಸುಮಾರು ಎಂಟು ಸಾವಿರ ಕೋಟಿ ರೂ. ವೆಚ್ಚ ಮಾಡಿದ್ದೇವೆ.
►ಕೆರೆಗಳನ್ನು ತುಂಬಿಸಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿದೆ. ಕೋಲಾರ ಮತ್ತಿತರ ಜಿಲ್ಲೆಗಳಿಗೆ ಸಂಸ್ಕರಿಸಿದ ನೀರು ಕೊಡಲಿದ್ದೇವೆ. ಇದು ಕುಡಿಯುವ ಉದ್ದೇಶಕ್ಕೆ ಅಲ್ಲ. ಕೆರೆಗಳನ್ನು ತುಂಬಿಸಲು ಮಾತ್ರ.ಇದು 2450 ಕೋಟಿ ರೂ.ವೆಚ್ಚದ ಯೋಜನೆ.
►13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನ ಹೊಳೆ ಯೋಜನೆ ಜಾರಿಯಾಗುತ್ತಿದೆ. ಇದರಿಂದ ಬಯಲು ಸೀಮೆಯ ಜಿಲ್ಲೆಗಳಲ್ಲಿ ಕೆರೆಗಳು ತುಂಬುತ್ತವೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುತ್ತದೆ.

►ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧದ ತೀರ್ಪಿನಲ್ಲಿ ಬೆಂಗಳೂರಿಗೂ ನೀರು ಸಿಕ್ಕಿದೆ. ರಾಜ್ಯದ ಪರ ವಾದ ಮಂಡಿಸಿದ ನಮ್ಮ ವಕೀಲರನ್ನು ಅಭಿನಂದಿಸುತ್ತೇನೆ. ಮಹಾದಾಯಿ ವಿಚಾರದಲ್ಲೂ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಮಹಾದಾಯಿ ವಿಷಯದಲ್ಲಿ ಕೊಂಚ ರಾಜಕೀಯ ಆಗಿರಬಹುದು. ಆದರೆ, ಕಾವೇರಿ ವಿಚಾರದಲ್ಲಿ ಪ್ರತಿ ಪಕ್ಷಗಳೂ ಸೇರಿ ಯಾರೂ ರಾಜಕೀಯ ಮಾಡಲಿಲ್ಲ.
►ನೀರಾವರಿಗೆ ಐದು ವರ್ಷದಲ್ಲಿ 58 ಸಾವಿರ ಕೋಟಿ ರೂ. ಅನುದಾನ ನಿಗದಿ ಮಾಡಿ ಜನವರಿ ವರೆಗೆ 44,542 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಎಂಟೂವರೆ ಸಾವಿರ ಕೋಟಿ ನಿಗದಿ ಮಾಡಿ ಏಳೂವರೆ ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ.
►ನೀರಾವರಿಯ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಅನುದಾನ ಬೇಕಾಗುತ್ತದೆ. ಟೇಕಾಫ್ ಆಗದ ಸರ್ಕಾರ ಈ ಎಲ್ಲ ಕೆಲಸ ಮಾಡಲು ಸಾಧ್ಯವೇ?ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ