ರಾಜಕೀಯ ಬದುಕು-ತೆರೆದ ಪುಸ್ತಕದಂತೆ

cm siddaramaiah long speech in session

22-02-2018

ವಿಧಾನ ಮಂಡಲದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಉತ್ತರದ ಮುಖ್ಯಾಂಶಗಳು:

ಕೆಲವರು ನನ್ನನ್ನು ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಾರೆ. ಪರವಾಗಿಲ್ಲ ನಾನು ಅದನ್ನು ಎದುರಿಸಬಲ್ಲೆ. ಸಮರ್ಥವಾಗಿ ಉತ್ತರಿಸಬಲ್ಲೆ. ನನ್ನ ರಾಜಕೀಯ ತೆರೆದ ಪುಸ್ತಕದಂತೆ. 
ಸುಮ್ಮ ಸುಮ್ಮನೆ ನಮ್ಮ ಸರ್ಕಾರವನ್ನು ಭ್ರಷ್ಟ ಸರ್ಕಾರ ಎನ್ನುತ್ತಾರೆ. ಹತ್ತು ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಆರೋಪಿಸುತ್ತಾರೆ, ಇವರ ಆರೋಪಗಳಿಗೆ ಆಧಾರ ಎಲ್ಲಿದೆ?  ನೀರವ್ ಮೋದಿ ಹನ್ನೊಂದು ಸಾವಿರ ಕೋಟಿ ರೂಪಾಯಿ ನುಂಗಿ ಪರಾರಿಯಾಗಿದ್ದಾರೆ. ಲಲಿತ್ ಮೋದಿ, ವಿಜಯ ಮಲ್ಯ ಸಾವಿರಾರು ಕೋಟಿ ದೋಚಿ ದೇಶದಿಂದ ಓಡಿ ಹೋಗಿದ್ದಾರೆ. ಇದಕ್ಕೆಲ್ಲ ಯಾರು ಜವಾಬ್ದಾರಿ.  ಸತ್ಯ ಹೇಳಿದರೆ ಬಿಜೆಪಿಯವರು ಸಹಿಸುವುದಿಲ್ಲ. ನೀರವ್ ಮೋದಿ ಬಗ್ಗೆ ಮಾತನಾಡಿದರೆ, ಅವರು ಏಕೆ ಸಹನೆ ಕಳೆದುಕೊಳ್ಳಬೇಕು. ಮಾತೆತ್ತಿದರೆ ಡೈರಿ ಡೈರಿ ಎನ್ನುತ್ತಾರೆ. ಸಹಾರ ಡೈರಿಯಲ್ಲಿ ಯಾರ ಇನಿಷಿಯಲ್ ಇದೆ ಎಂಬುದನ್ನು ಬಿಜೆಪಿಯವರೇ ಹೇಳಬೇಕು. ನಾನು ಕೇಂದ್ರ ಸರ್ಕಾರವನ್ನು 90 ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಹೇಳುತ್ತೇನೆ. ಬಿಜೆಪಿ ಸರ್ಕಾರ ಇದ್ದಾಗ ಇಲ್ಲಿ ಮುಖ್ಯಮಂತ್ರಿ ಆಗಿದ್ದವರು ಜೈಲಿಗೆ ಹೋಗಿಲ್ಲವೇ. ಅವರಿಂದ ನಾವು ಪಾಠ ಕಲಿಯಬೇಕೇ? ದಾಖಲೆ ಇಲ್ಲದೆ ಸುಳ್ಳು ಆರೋಪಗಳನ್ನು ಮಾಡುವುದು ಹಿಟ್ ಅಂಡ್ ರನ್ ಕೇಸಿನಂತೆ.


ಸಂಬಂಧಿತ ಟ್ಯಾಗ್ಗಳು

siddaramaiah lalith modi ನೀರವ್ ಮೋದಿ ರಾಜಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ