ಶಾಸಕರ ಬೆಂಬಲಿಗರ ಪುಂಡಾಟಿಕೆ ನಿಂತಿಲ್ಲ..

mla s.t.somashekar

22-02-2018

ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಶಾಸಕರ ಬೆಂಬಲಿಗರ ಪುಂಡಾಟಿಕೆ ಮುಂದುವರೆದಿದೆ. ಯಶವಂತಪುರ ಶಾಸಕ ಸೋಮಶೇಖರ್ ಬೆಂಬಲಿಗರು, ಕಾಂಗ್ರೆಸ್ ಸಮಾವೇಶಕ್ಕೆ ಜಾಗ ನೀಡದ ಜಮೀನು ಮಾಲೀಕನಿಗೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ‘ಮನೆ ಮನೆಗೆ ಕಾಂಗ್ರೆಸ್’ ಸಮಾವೇಶ ಕಾರ್ಯಕ್ರಮ ಆಯೋಜನೆಗೆ ಜಾಗ ಕೊಡಲು ನಿರಾಕರಿಸಿದ ಪುಟ್ಟರಾಜುಗೆ ಶಾಸಕ ಎಸ್.ಟಿ.ಸೋಮಶೇಖರ್ ಬೆಂಬಲಿಗರು ಧಮ್ಕಿ ಹಾಕಿರುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾಂಪೌಂಡ್ ಹಾಕಿರುವ 4 ಎಕರೆ ಜಾಗದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಎಂಬುವರ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು, ಹಲ್ಲೆ ಬಗ್ಗೆ ವರದಿ ಪಡೆದು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

s.t.somashekar goondaism ಬೆಂಬಲಿಗರು ಧಮ್ಕಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ