ಬೆಂಗಳೂರು ರಕ್ಷಾ ಯಾತ್ರೆ…

Bangalore Raksha Yatra ...

23-02-2018

ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರ ಆಪ್ತರು ಮತ್ತು ಬೆಂಬಲಿಗರ ದಬ್ಬಾಳಿಕೆ ಪ್ರಕರಣಗಳು ಹೆಚಾಗುತ್ತಿದ್ದಂತೆ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾದ ಬಿಜೆಪಿ, ಬೆಂಗಳೂರು ರಕ್ಷಾ ಯಾತ್ರೆಗೆ ಸಿದ್ಧತೆ ನಡೆಸಿದೆ. ಗವಿ ಗಂಗಾಧರೇಶ್ವರ ದೇವಸ್ಥಾನದಿಂದ ಆರಂಭಿಸಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆಯೆಂದು ತಿಳಿದುಬಂದಿದೆ.

ಮಾಜಿ ಡಿಸಿಎಂ ಆರ್.ಅಶೋಕ್ ಸೇರಿದಂತೆ ನಗರ ಬಿಜೆಪಿ ಶಾಸಕರ ನೇತೃತ್ವದಲ್ಲಿ ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ. ಮಾರ್ಚ್ 15ರೊಳಗೆ ಬೆಂಗಳೂರು ರಕ್ಷಾ ಪಾದಯಾತ್ರೆ ಮುಕ್ತಾಯಗೊಳಿಸಿ, ಬೃಹತ್ ಸಮಾರೋಪ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರನ್ನು ಆಹ್ವಾನಿಸಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವೈಫಲ್ಯತೆ ಬಗ್ಗೆ ಖಡಕ್ ಭಾಷಣ ಮಾಡಿಸಲು ಬಿಜೆಪಿ ಸಜ್ಜಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Bengaluru BJP ವಿಧಾನಸಭಾ ಸುವ್ಯವಸ್ಥೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ