ಯಡಿಯೂರಪ್ಪ ಆರೋಪ ಸುಳ್ಳು…

Yeddyurappa allegations is lie...

23-02-2018

ವಿಜಯಪುರ: ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ, ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಕಷ್ಟು ಹಣ ವೆಚ್ಚ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟಿದ್ದ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಯಡಿಯೂರಪ್ಪನವರ ಹೇಳಿಕೆ ದುರಾದೃಷ್ಟಕರ ಎಂದು ಪರಮೇಶ್ವರ್ ಹೇಳಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷ ನೂರಾರು ಕೋಟಿ ರೂ. ಖರ್ಚು ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾದದ್ದು, ಹಾಗೇನಾದರೂ ಇದ್ದರೆ ಬಿಜೆಪಿಯವರೇ ಲೆಕ್ಕ ಕೊಡಲಿ, ದಾಖಲೆ ನೀಡಲಿ ಎಂದು ಪರಮೇಶ್ವರ್ ಸವಾಲೆಸೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kpcc parameshwar ಪರಿಶಿಷ್ಟ ಜಾತಿ ಪಂಗಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ