ಜೈಲಿನಲ್ಲೂ ನಲಪಾಡ್ ದರ್ಬಾರ್?

Nalapad Darbar in jail?

23-02-2018

ಬೆಂಗಳೂರು: ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿಯೂ ದರ್ಬಾರ್ ನಡೆಸಿ ಬಿರಿಯಾನಿ ಸವಿದು,  ಮೊಬೈಲ್ ಫೋನ್ ಕೂಡ ಬಳಸಿದ್ದಾನೆ. ಕಳೆದ ರಾತ್ರಿ ನಲಪಾಡ್ ಗೆ ಪ್ರಕರಣದ ಮತ್ತೊಬ್ಬ ಆರೋಪಿ ಮಂಜುನಾಥ್ ಮನೆಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಜೈಲಿನಲ್ಲಿದ್ದರೂ ಮೊಬೈಲ್ ಫೋನ್ ನಲ್ಲಿ ಮಾತನಾಡಲು ನಲಪಾಡ್ ಹ್ಯಾರಿಸ್ ಗೆ ಅವಕಾಶ ನೀಡಲಾಗಿದೆ ಹಾಗೂ ರಾಜಾಥಿತ್ಯ ನೀಡಲಾಗಿದೆ ಎನ್ನುವುದನ್ನು ನಿರಾಕರಿಸಿರುವ ಕಾರಾಗೃಹದ ಹಿರಿಯ ಅಧಿಕಾರಿಗಳು, ಇತರ ಕೈದಿಗಳಿಗೆ ಇರುವಂತೆ ನಲಪಾಡ್ ಗೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nalapad Bail ಮೊಬೈಲ್ ಕೈದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ