ಅಥಣಿಯಲ್ಲಿ ಜನಾಶೀರ್ವಾದ ಯಾತ್ರೆ

Rahul gandhi huge meeting in belagavi

23-02-2018

ಬೆಳಗಾವಿ: ಫೆ.24ರಿಂದ ಕಾಂಗ್ರೆಸ್ ಪಕ್ಷದ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ಆರಂಭವಾಗುತ್ತಿದೆ. ಅಥಣಿಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಿದ್ಧತೆಗಳನ್ನು ಅವಲೋಕಿಸುತ್ತಿದ್ದಾರೆ. ಅಥಣಿ ಸಮಾವೇಶದಲ್ಲಿ ಸುಮಾರು 4 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ. ಮುಂಬೈ ಕರ್ನಾಟಕದ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಬರುತ್ತಿರುವುದು ಈ ಭಾಗದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ, ರಾಹುಲ್ ಭಾಷಣ ಇಲ್ಲಿನ ಜನತೆಗೆ ಸ್ಪೂರ್ತಿದಾಯಕ ಎಂದು ಹೇಳಿರುವ ರಮೇಶ್ ಜಾರಕಿ ಹೊಳಿ,  2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದ್ದು, ಸಿದ್ದರಾಮಯ್ಯನವರೇ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress Rahul Gandhi ಬೃಹತ್ ಸಾರ್ವಜನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ