ಪಂಚಾಯತಿ ಕಚೇರಿಗೆ ಬೀಗ ಜಡಿದ ಗ್ರಾಮಸ್ಥರು

villagers protested for drinking water: Davanagere

23-02-2018

ದಾವಣಗೆರೆ: ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ, ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಒದಗಿಸದ ಹಿನ್ನೆಲೆ, ಪಂಚಾಯತಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ನೀರು ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.


ಸಂಬಂಧಿತ ಟ್ಯಾಗ್ಗಳು

panchayath drinking water ಒತ್ತಾಯ ತರಾಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ