ರಾಷ್ಟ್ರೀಯ ಪಕ್ಷಗಳಿಂದ ಪರ್ಸೆಂಟೇಜ್ ರಾಜಕೀಯ

Percentage politics from national parties-HDK

23-02-2018

ಚಿಕ್ಕಮಗಳೂರು: ರಾಜ್ಯದ ಎಲ್ಲ ರಾಜಕೀಯ ಪಕ್ಷಗಳೂ ಪ್ರಚಾರದಲ್ಲಿ ತೊಡಗಿವೆ. ಬಜೆಟ್ ಸೇರಿದಂತೆ ಯಾವುದೇ ಕಲಾಪಗಳಲ್ಲಿಯೂ ನಾನು ಭಾಗವಹಿಸಿಲ್ಲ, ಆದರೆ ರಾಜ್ಯದ ಸಮಸ್ಯೆಗಳನ್ನು ಸರ್ಕಾರ ಎಷ್ಟರ ಮಟ್ಟಿಗೆ ಬಗೆಹರಿಸಿದೆ ಎಂಬುದು ನನಗೆ ಗೊತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸದೆ ಕ್ಷುಲ್ಲಕ ವಿಷಯಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಹೆಚ್ಡಿಕೆ ಆರೋಪಿಸಿದ್ದಾರೆ. ಈ ಸರ್ಕಾರ, ಕೇವಲ ಜಾಹೀರಾತಿನ ಸರ್ಕಾರ, ಜನರ ತೆರಿಗೆ ಹಣದಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿದೆ, ಎರಡೂ ರಾಷ್ಟ್ರೀಯ ಪಕ್ಷಗಳು ಪರ್ಸೆಂಟೇಜ್ ರಾಜಕೀಯ ಮಾಡುತ್ತಿವೆ ಎಂದು ಅವರು ಟೀಕಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ರಾಜ್ಯದಲ್ಲಿ ಎರಡು ಬಾರಿ ಭಾಷಣ ಮಾಡಿದ್ದಾರೆ, ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಕೊಡುಗೆ ಬಗ್ಗೆ ಮಾತನಾಡಿಲ್ಲ, ಅಭಿವೃದ್ದಿ ಬಗ್ಗೆ ಮಾತನಾಡಿಲ್ಲ, ಕೇವಲ ರಾಹುಲ್ ಗಾಂಧಿ, ಸಿದ್ದರಾಮಯ್ಯನವರ ತೆಗಳಿಕೆಗೆ ಸೀಮಿತವಾಗಿದ್ದಾರೆ ಎಂದು ಕುಮಾರ ಸ್ವಾಮಿ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

HD kumara swamy siddaramaiah ಪರ್ಸೆಂಟೇಜ್ ರಾಜಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ