ನವಜಾತ ಶಿಶು ಅಪಹರಣ..!

Newborn baby abduction ..!

24-02-2018

ಕೋಲಾರ: ಕೆಜಿಎಫ್ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶು ಅಪಹರಣವಾಗಿರುವ ಘಟನೆ ಬೆಳಕಿಗೆ ಬಂದಿದೆ. ತಾಲ್ಲೂಕಿನ ಚಲ್ದಿಗಾನಹಳ್ಳಿಯ ಮಾಲ-ರಾಮಚಂದ್ರ ದಂಪತಿಗೆ ನಿನ್ನೆ ಗಂಡು ಮಗು ಜನಿಸಿದ್ದು, ಶುಶ್ರೂಷೆಗಾಗಿ ತಾಯಿ ಮಗು ಒಳ ರೋಗಿಯಾಗಿ ದಾಖಲಾಗಿದ್ದರು. ಆದರೆ ಬೆಳಗಾಗುವಷ್ಟರಲ್ಲಿ ಮಗು ಕಾಣೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮುದುಕಿಯೊಬ್ಬಳಿಂದ ಶಿಶು ಅಪಹರಣ ಆಗಿರಬಹುದೆಂದು ಶಂಕಿಸಲಾಗಿದೆ. ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ವರ್ತನೆ ಸಹ ಅನುಮಾನಾಸ್ಪದವಾಗಿ ಕಂಡುಬಂದಿದ್ದು, ರಾಬರ್ಟ್ ಸನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

new born baby kindap ರಾಬರ್ಟ್ ಸನ್ ಪೇಟೆ ಅಪಹರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ