ಕೆಎಸ್ಆರ್ಟಿಸಿ ಬಸ್-ಶಾಲಾ ವಾಹನ ಅಪಘಾತ

ksrtc bus and school van accident

24-02-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದ ರಾಯರ ಪಾಳ್ಯದಲ್ಲಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರನೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಶಾಲಾ ವಾಹನ ಹಾಗು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಸದ್ಯ ಬೈಕ್ ಸವಾರನ ವಿವರಗಳು ಪತ್ತೆಯಾಗಿಲ್ಲ. ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದ ಎನ್ನಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident highway ಕೆಎಸ್ಆರ್ಟಿಸಿ ಅಪಘಾತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ