ಮೆಟ್ರೋ ರೈಲು ಸಂಚಾರ ವ್ಯತ್ಯಯ

variation in Metro rail transportation

24-02-2018

ಬೆಂಗಳೂರು: ನಗರದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಆರ್.ವಿ.ರಸ್ತೆ ಸ್ಟೇಷನ್ನಿಂದ ಯಲಚೇನಹಳ್ಳಿ ಸ್ಟೇಷನ್ ನಡುವಿನ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ತುರ್ತು ಟ್ಯ್ರಾಕ್ ಕಾಮಗಾರಿ ಹಿನ್ನೆಲೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದ್ದು, ಸುಮಾರು 26ಗಂಟೆಗಳ ಕಾಲ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದು ರಾತ್ರಿ 9ಗಂಟೆಯಿಂದ ನಾಳೆ ರಾತ್ರಿ 11ರವರೆಗೂ ಸಂಚಾರ ಸ್ಥಗಿತಗೊಳ್ಳಲಿದೆ. ಇದರಿಂದ ಪ್ರಯಾಣಿಕರ ‌ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.  26ರ ಮುಂಜಾನೆ 5 ಗಂಟೆಯಿಂದ ಈ ಮಾರ್ಗದ ಸಂಚಾರ ಎಂದಿನಂತೆ ಆರಂಭವಾಗಲಿದೆ.


ಸಂಬಂಧಿತ ಟ್ಯಾಗ್ಗಳು

Metro train bengaluru ಸಂಚಾರ ಸ್ಥಗಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ