ಬಿಜೆಪಿ ಮುಖಂಡರಿಂದ ಸಂಚಾರ ನಿಯಮ ಉಲ್ಲಂಘನೆ

taffic rules crossed by BJP leaders

24-02-2018

ದಾವಣಗೆರೆ: ಹೆಲ್ಮೆಟ್ ಹಾಕಿಕೊಳ್ಳದೇ ಬೈಕ್ ಚಲಾಯಿಸಿದ ಸಂಸದ ಜಿ.ಎಂ.ಸಿದ್ದೇಶ್ ಮತ್ತು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಕಾನೂನು ಪಾಲನೆ ಮಾಡಬೇಕಿದ್ದ ಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ ವಿರುದ್ಧ ಟೀಕೆಗಳು ಕೇಳಿ ಬರುತ್ತಿವೆ. ದಾವಣಗೆರೆಯಲ್ಲಿ ಫೆ.27 ರಂದು ರೈತ ಸಮಾವೇಶ ಹಿನ್ನೆಲೆ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ನಂತರ ಹೆಲ್ಮೆಟ್ ಹಾಕಿಕೊಳ್ಳದೆಯೇ ಬೈಕ್ ಚಾಲನೆ ಮಾಡಿದ್ದಾರೆ. ಇವರೊಂದಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತಿತರೂ ಹೆಲ್ಮೆಟ್ ಹಾಕಿಕೊಳ್ಳದೆಯೇ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ