ಮಗನೇ ಇಲ್ಲದ ಮೇಲೆ...

Mother died because of the son

26-02-2018

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯದ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಸರೋಜಮ್ಮ (47) ಮೃತ ತಾಯಿ. ಕಿರುಗಾವಲು ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮಗ ನಿತಿನ್ ಸಾವನ್ನಪ್ಪಿದ್ದಾರೆ. ನಿತನ್ನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ಸರೋಜಮ್ಮ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಮಗನ ಅಂತ್ಯಕ್ರಿಯೆಗೂ ಮುನ್ನವೇ ತಾಯಿಯೂ ಸಾವನ್ನಪ್ಪಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Heart attack died ಅಂತ್ಯಕ್ರಿಯೆ ಹೃದಯಾಘಾತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ