ರಾಹುಲ್ ಗಾಂಧಿಗೆ ಹೆಚ್.ಕೆ.ಪಾಟೀಲ್ ಸಾಥ್

Rahul gandhi election campaign in uttar karnataka

26-02-2018

ಬಾಗಲಕೋಟೆ: ಉತ್ತರ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿಯೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಸಾಥ್ ನೀಡಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಪಾಟೀಲ್, ರಾಹುಲ್ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜೊತೆ ಸಂತಸದಿಂದ ಚರ್ಚಿಸಿದ್ದಾರೆ. ಚುನಾವಣೆಯಲ್ಲಿ ಮಹಿಳೆಯರು ಮತ್ತು ಯುವಕರನ್ನು ಸೆಳೆಯಲು ಮತ್ತು ಪಕ್ಷವನ್ನು ತಳಮಟ್ಟದಿಂದ ಸಮರ್ಥವಾಗಿ ಸಂಘಟಿಸಲು ಸೂಚಿಸಿದ್ದಾರೆ ಎಂದು ಹೇಳಿದರು. 

ಚರ್ಚೆಯಲ್ಲಿ ಟಿಕೆಟ್ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪವಾಗಿಲ್ಲ ಎಂದ ಪಾಟಿಲ್, ಮಹಾದಾಯಿ ಬಗ್ಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇವೆ ಎಂದರು. ರಾಹುಲ್ ಭಾಷಣದಲ್ಲಿ ಬಸವಣ್ಣನವರ ವಚನ ಪ್ರಸ್ತಾಪದ ಕುರಿತು, ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ. ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗುತ್ತಿದೆ, ಹೋದಲ್ಲೆಲ್ಲಾ ಲಕ್ಷಾಂತರ ಜನ ಸೇರುತ್ತಿದ್ದಾರೆ, ಇದು ವಿರೋಧ ಪಕ್ಷ ಬಿಜೆಪಿಗೆ ಸಹಜವಾಗಿಯೇ ಸಹಿಸಲು ಆಗುತ್ತಿಲ್ಲ. ಆದ್ದರಿಂದ ಅಮಿತ್ ಷಾ ಸಹ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

Rahul Gandhi H.Kpatil ಪ್ರವಾಸ ಯಶಸ್ವಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ