'ಗಣಿಗಾರಿಕೆಯಿಂದ ಪ್ರಕೃತಿ ಮೇಲೆ ಬಲಾತ್ಕಾರ'26-02-2018

ಬಳ್ಳಾರಿ: ಅಕ್ರಮ ಗಣಿಗಾರಿಕೆ ಹೆಸರಲ್ಲಿ ಪ್ರಕೃತಿ ಮೇಲೆ ಬಲಾತ್ಕಾರ ಮಾಡಲಾಗಿದೆ, ಬಳ್ಳಾರಿಯ ಸಂಡೂರಿನ ಆರಾಧ್ಯ ದೈವ ಕುಮಾರಸ್ವಾಮಿ ದೇವಸ್ಥಾನಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಗುಡುಗಿದ್ದಾರೆ. ಬಳ್ಳಾರಿ ಪ್ರವಾಸದಲ್ಲಿರುವ ಹೆಚ್.ಡಿ.ಕುಮಾರ ಸ್ವಾಮಿ, ಸಂಡೂರಿನ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಈ ಮಾತನ್ನು ಹೇಳಿದ್ದಾರೆ.

ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವೆ, ಧಾರ್ಮಿಕ ಭಾವನೆಗೆ ಧಕ್ಕೆಯಾಗಲು ಬಿಡಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇವಸ್ಥಾನದ ಮೂರು ಕಿ.ಮಿ. ಸುತ್ತಮುತ್ತ ಗಣಿಗಾರಿಕೆ ‌ನಿಷೇಧಿಸುತ್ತೇನೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

HD kumara swamy Temple ಸರ್ಕಾರ ನಿಷೇಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ