ಬಸ್ ಚಾಲಕನಿಂದ ಇದೆಂಥಾ ಕೃತ್ಯ..!

Bus conductor attempted to Rape a lady in park

26-02-2018

ಬೆಂಗಳೂರು: ಮತ್ತಿಕೆರೆಯ ಜೆ.ಪಿ.ಪಾರ್ಕ್‍ನಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಮೇಲೆ ಕೆಎಸ್‍ಆರ್‍ಟಿಸಿ ಬಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಹೀನ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಫೆಬ್ರವರಿ 21ರಂದು ನಡೆದ ಈ ಹೀನ ಕೃತ್ಯದ ಸಂಬಂಧ ಕೆಎಸ್‍ಆರ್ ಟಿಸಿ ಬಸ್ ಚಾಲಕ ಶ್ಯಾಮ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಫೆ.21ರಂದು ರಂದು ಗೃಹಿಣಿಯೊಬ್ಬರು ವಾಯುವಿಹಾರಕ್ಕೆಂದು ಮತ್ತಿಕೆರೆಯ ಜೆಪಿ ಪಾರ್ಕ್ ಗೆ ಬೆಳಗ್ಗೆ ಸುಮಾರು 11.30ಕ್ಕೆ ಹೋಗಿದ್ದಾರೆ. ಗೃಹಿಣಿ ಪಾರ್ಕ್ ಒಳಭಾಗದಲ್ಲಿ ಹೋಗಿ ವಾಯುವಿಹಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಆರೋಪಿ ಶ್ಯಾಮ್ ಬಂದು ಏಕಾಏಕಿ ಆಕೆಯ ಕೈ ಹಿಡಿದು ಎಳೆದುಕೊಂಡು ಪಕ್ಕದಲ್ಲಿದ್ದ ಪೊದೆಯೊಳಗೆ ಹೋಗಿದ್ದಾನೆ. ಸಂತ್ರಸ್ತೆಯನ್ನು ತಬ್ಬಿಕೊಂಡು ಕೂಗಾಡಲು ಬಿಡದಂತೆ ಬಾಯಿಯನ್ನ ಮುಚ್ಚಿದ್ದಾನೆ. ಬಳಿಕ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ.

ಸಂತ್ರಸ್ತೆ ಕೂಗಾಡಿದ್ದರಿಂದ ಯಾರಿಗಾದರೂ ಈ ವಿಚಾರ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಿ ಅಲ್ಲೇ ಪಾರ್ಕ್‍ನಲ್ಲಿದ್ದ ಸಾರ್ವಜನಿಕರು ಸಂತ್ರಸ್ತೆಯ ಸಹಾಯಕ್ಕೆ ದೌಡಾಯಿಸಿದ್ದಾರೆ. ನಂತರ ಸಾರ್ವಜನಿಕರ ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಶ್ಯಾಮ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Harassment K.S.R.T.C ಸಂತ್ರಸ್ತೆ ಸಾರ್ವಜನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ