ಇಂದು ಮಹತ್ವದ ಸಚಿವ ಸಂಪುಟ ಸಭೆ

state cabinet meeting today

27-02-2018

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಹೊಸ್ತಿಲ್ಲಲಿರುವ ಬೆನ್ನಲ್ಲೇ ವೇತನ ಪರಿಷ್ಕರಣೆಗೆ ಮುಂದಾಗಿರುವ ಸರ್ಕಾರ, ರಾಜ್ಯ ಸರ್ಕಾರಿ‌ ನೌಕರರಿಗೆ ಸಿಹಿ ಸುದ್ದಿ ನೀಡಲಿದೆ. ಈಗಾಗಲೇ ಬಜೆಟ್ ನಲ್ಲಿ ಆರನೇ ವೇತನ ಆಯೋಗದ ಶಿಫಾರಸುಗಳ ಕುರಿತು ಪ್ರಸ್ತಾಪ ಮಾಡಿತ್ತು. ಆದರೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಬೇಕಿದ್ದು, ಈ ಕುರಿತು ಇಂದು ಸಂಜೆ ನಡೆಯಲಿರುವ ಸಚಿವಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ. ಸಂಪುಟ ಸಭೆಯಲ್ಲಿ ಅನುಮೋದನೆ‌ ಸಿಕ್ಕ ಬಳಿಕ ವೇತನ ಪರಿಷ್ಕರಣೆ ಏಪ್ರಿಲ್ ನಿಂದಲೇ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Pay Commission Government ಪ್ರಸ್ತಾಪ ಅನುಮೋದನೆ‌


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ