'ಬಿಜೆಪಿಯವರದು ಚುನಾವಣಾ ಗಿಮಿಕ್'27-02-2018

ಬೆಂಗಳೂರು: ರೈತ ನಾಯಕ ಎಂದು ಹೇಳಿಕೊಳ್ಳಲು ಯಡಿಯೂರಪ್ಪ ಅವರಿಗೆ ಯಾವ ನೈತಿಕತೆ ಇದೆ ಎಂದು, ಗೃಹ ಸಚಿವ ರಾಮಲಿಂಗಾ ರೆಡ್ಡಿ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಯಡಿಯೂರಪ್ಪ ಅವರ ಹುಟ್ಟುಹಬ್ಬ ಪ್ರಯುಕ್ತ ಹಮ್ಮಿಕೊಂಡಿರುವ ರೈತ ಸಮಾವೇಶ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ವಿಧಾನಸೌಧದ ಮುಂದೆ ಪ್ರಮಾಣ ವಚನ ಸ್ವೀಕಾರ ಮಾಡಿ, ಬಳಿಕ ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದಾರೆ ಎಂದು ದೂರಿದರು. ಚುನಾವಣೆಗಾಗಿ ಈಗ ರೈತ ಸಮಾವೇಶ ಮಾಡುತ್ತಿದ್ದು, ಇದೆಲ್ಲಾ ಚುನಾವಣಾ ಗಿಮಿಕ್ ಎಂದಿದ್ದಾರೆ.

ಪ್ರಧಾನಿ ಮೋದಿ ಅವರ ಮುಂದೆ ರೈತರ ಸಾಲ ಮನ್ನ ಮಾಡಿ ಅಂತ ಹೇಳುವ ಧೈರ್ಯ ಬಿಜೆಪಿಯವರಿಗಿಲ್ಲ. ರೈತರ ಸಾಲ ಮನ್ನಾ ಮಾಡದೆ ಮೋದಿ ಸುಮ್ಮನೆ ಭಾಷಣ ಮಾಡುತ್ತಿದ್ದಾರೆ. ಬರ ಪರಿಹಾರದಲ್ಲಿ ನಮಗೆ ಮೋಸ ಮಾಡಿದ್ದಾರೆ. ಕಾವೇರಿ, ಮಹದಾಯಿ ವಿಚಾರದಲ್ಲೂ ಮೋದಿ ಅನ್ಯಾಯ ಮಾಡಿದ್ದಾರೆ. ಆದರೆ ಈಗ ರೈತರ ಪರ ಅಂತ ನಾಟಕ ಮಾಡಲು ಸಮಾವೇಶ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಹದಾಯಿ ವಿವಾದ ನ್ಯಾಯಾಧೀಕರಣ ಹೊರಗೆ ಇತ್ಯರ್ಥ ಮಾಡಿಕೊಳ್ಳಿ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯ ಮಾಡುತ್ತಿದ್ದೇವೆ, ಗೋವಾ ಕಾಂಗ್ರೆಸ್ ಅನ್ನು ಒಪ್ಪಿಸುವ ಅಗತ್ಯ ಇಲ್ಲ. ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನ ಕರೆದು ಪಿಎಂ ಮಾತಾಡಲಿ ಎಂದು ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ