ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆ ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಸರಬರಾಜು

Kannada News

02-05-2017

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2284 ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಿದೆ. 1715 ಗ್ರಾಮಗಳ 90 ಲಕ್ಷ ಜನರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಜನ, ಜಾನುವಾರುಗಳಿಗೆ ನೀರು ಒದಗಿಸುವ ಕೆಲಸವನ್ನು ಕಂದಾಯ ಮತ್ತು ಗ್ರಾಮೀಣ ಅಭಿವೃದ್ದಿ ಇಲಾಖೆ ಮಾಡುತ್ತಿದೆ. 24 ಜಿಲ್ಲೆಗಳಲ್ಲಿ ತೆರೆಯಲಾಗಿದ್ದ ಗೋ ಶಾಲೆ ಮತ್ತು ಮೇವು ಬ್ಯಾಂಕ್‍ಗಳನ್ನು ಹೆಚ್ಚಿಸಲಾಗಿದೆ. ಇದರಿಂದ ಗೋಶಾಲೆಗಳ ಸಂಖ್ಯೆ 60ರಿಂದ 94ಕ್ಕೆ ಏರಿಕೆಯಾಗಿದೆ. ಮೇವು ಬ್ಯಾಂಕ್‍ಗಳು ಕೂಡ 360ರಿಂದ 424ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸುಮಾರು 1,29,170 ಜಾನುವಾರುಗಳಿಗೆ ಮೇವು ಮತ್ತು ನೀರನ್ನು ಒದಗಿಸಲಾಗುತ್ತಿದೆ

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ