ಅಮಿತ್ ಷಾಗೆ ಉಮಾಶ್ರೀ ಟಾಂಗ್27-02-2018

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಿಳಾ ಕ್ರೀಡಾಕೂಟ ಆಯೋಜಿಸಲಾಗಿದ್ದು, ಕ್ರೀಡಾಕೂಟಕ್ಕೆ ಬಲೂನ್ ಹಾರಿಸುವುದರ ಮೂಲಕ, ಸಚಿವೆ ಉಮಾಶ್ರೀ ಚಾಲನೆ ನೀಡಿದರು. ಇದೇ ವೇಳೆ ಮಹಿಳಾ ಮಣಿಯರನ್ನು ಹುರಿದುಂಬಿಸಲು, ಕ್ರೀಡಾಪಟುಗಳ ಜೊತೆಗಿಳಿದು ಭಾಗವಹಿಸಿದರು.

ನಂತರದಲ್ಲಿ ಮಾತನಾಡಿದ ಉಮಾಶ್ರೀ, ಮಹಾದಾಯಿ ವಿಚಾರವಾಗಿ ಅಮಿತ್ ಷಾ ಗೆ ಟಾಂಗ್ ನೀಡಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಚುನಾವಣೆ ಮುಗಿಯುವವರೆಗೂ ಕಾಯೋ ಅಗತ್ಯವಿಲ್ಲ. ಸರ್ವಪಕ್ಷ ಸಭೆ ಕರೆದು ಮಹದಾಯಿ ಸಮಸ್ಯೆ ಬಗೆಹರಿಸಿ ಎಂದು, ಚುನಾವಣೆ ಬಳಿಕ ಮಹದಾಯಿ ಸಮಸ್ಯೆ ಬಗೆಹರಿಯಲಿದೆ ಎಂಬ ಅಮಿತ್ ಷಾ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ರಾಜ್ಯಕ್ಕೆ ಬಂದರೆ ರಾಜ್ಯದಲ್ಲಿ ಮಿರಾಕಲ್ ಗಳೇನು ನಡೆಯೋದಿಲ್ಲ, ರಾಜ್ಯದ ಜನತೆ ತಿಳುವಳಿಕೆ ಉಳ್ಳಂತವರು, ರಾಜ್ಯದಲ್ಲಿ ಏನಾಗುತ್ತಿದೆ ಏನಿಲ್ಲ ಎಂಬುದರ ಬಗ್ಗೆ ತಿಳುವಳಿಕೆ ಅವರಿಗಿದೆ. ಹಾಗಾಗಿ ಕೇಂದ್ರ ಬಿಜೆಪಿ ನಾಯಕರು ಬಂದು ರಾಜ್ಯದಲ್ಲಿ ಮಿರಾಕಲ್ ಮಾಡುತ್ತೇವೆ ಎಂದರೆ ಅದು ಸಾಧ್ಯವಾಗದ ಮಾತು ಎಂದರು. ಸಿಎಂ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯ ಯೋಜನೆಗಳನ್ನ ಕೊಟ್ಟಿದ್ದಾರೆ. ಜನ ನಮ್ಮ ಪರವಾಗಿದ್ದಾರೆ, ಈ ಬಾರಿಯೂ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರೋದು ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Umashree amit shah ತಿಳುವಳಿಕೆ ಜನಪ್ರಿಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ