‘ರೈತರ ಕಣ್ತಪ್ಪಿಸಿಕೊಂಡಿದ್ದಾರೆ ರಾಹುಲ್’

yeddyurappa celebrated his birthday in Bidar with BJP leaders

27-02-2018

ಬೀದರ್: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಮಹದಾಯಿ ವಿವಾದಕ್ಕೆ ಅಂತ್ಯ ಹಾಡಲಿದ್ದೇವೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ, ತಮ್ಮ 75ನೇ ಜನ್ಮದಿನವನ್ನು ಬೀದರ್ ನ ಬಿಜೆಪಿ ಮುಖಂಡರೊಂದಿಗೆ ಆಚರಿಸಿಕೊಂಡು ನಂತರದಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮಹಾದಾಯಿ ವಿವಾದಕ್ಕೆ ಸಂಪೂರ್ಣ ಅಂತ್ಯ ಹಾಡಲಾಗುವುದು‌ ಎಂದಿದ್ದಾರೆ. ಇದೇ ವೇಳೆ ರಾಹುಲ್ ವಿರುದ್ಧ ವ್ಯಂಗ್ಯವಾಡಿದ ಬಿಎಸ್ ವೈ ರಾಹುಲ್ ಗಾಂಧಿ ರೈತರ ಕಣ್ಣು ತಪ್ಪಿಸಿಕೊಂಡು ಹೋಗಿದ್ದಾರೆ ಎಂದರು.

ದಾವಣಗೆರೆ ಇಂದು ಪ್ರಧಾನಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಐತಿಹಾಸಿಕ ರೈತ ಸಮಾವೇಶ ಹಮ್ಮಿಕೊಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಶಾಸಕ ಪ್ರಭು ಚಾವಣ, ಪ್ರಕಾಶ ಖಂಡ್ರೆ, ಸೂರ್ಯಕಾಂತ ನಾಗಮಾರಪಳ್ಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 


ಸಂಬಂಧಿತ ಟ್ಯಾಗ್ಗಳು

Yeddyurappa Rahul Gandhi ಪ್ರಧಾನಿ ಜಿಲ್ಲಾಧ್ಯಕ್ಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ