ಸಂಚಾರಿ ಕ್ಯಾಂಟೀನ್ ಗೆ ಸಿಎಂ ಚಾಲನೆ

CM siddaramaiah inaugurated mobile canteen

27-02-2018

ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯ ಸವಿರುಚಿ ಸಂಚಾರಿ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ‌ಪ್ರತಿ ಜಿಲ್ಲೆಗೆ ಒಂದರಂತೆ ಸಂಚಾರಿ ಕ್ಯಾಂಟೀನ್ ನನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೀಡಲಾಗಿದೆ. ಇದೇ ವೇಳೆ ವಿಕಲಚೇತನ ಮಹಿಳೆಯರಿಗೆ ದ್ವಿಚಕ್ರ ವಾಹವಗಳನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸಚಿವೆ ಉಮಾಶ್ರೀ, ಕೆ.ಜೆ.ಜಾರ್ಜ್, ಎಚ್‌ಎಂ ರೇವಣ್ಣ, ಮೇಯರ್ ಸಂಪತ್ ರಾಜ್ ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ