ಮರಳು ಮಾಫಿಯ-ಅಧಿಕಾರಿಗಳು ಶಾಮೀಲು?

Sand mafia 5 officers detained..

28-02-2018

ಚಿಕ್ಕಮಗಳೂರು: ಮರಳು ಮಾಫಿಯ ಜೊತೆ ಶಾಮೀಲಾಗಿದ್ದ ಆರೋಪದ ಮೇಲೆ ಐವರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಚಿಕ್ಕಮಗಳೂರು ಪಿಡಬ್ಲ್ಯುಡಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶಪ್ಪ, ಸಹಾಯಕ ಎಂಜಿನಿಯರ್ ಲೋಕೇಶ್, ಎಇ ಚಿರಂಜೀವಿ ಸೇರಿ ಐವರನ್ನು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ರಮವಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ನಕಲಿ ಪರ್ಮಿಟ್ ನೀಡಲಾಗಿದೆ ಎನ್ನಲಾಗಿದ್ದು, ಇದಕ್ಕೆ ಅಧಿಕಾರಿಗಳ ಸಹಿ ಹಾಗೂ ಸೀಲ್ ಇರುವುದು ತಿಳಿದು ಬಂದಿದೆ. ಅಕ್ರಮ ಮರಳು ದಂಧೆಕೋರರ ಜೊತೆ ಕೈ ಜೋಡಿಸಿರುವ ಈ ಅಧಿಕಾರಿಗಳು, ಸುಮಾರು 10 ಕೋಟಿ ರೂಪಾಯಿಗಳಿಗೂ ಅಧಿಕ ಹಣ ಮಾಡಿಕೊಂಡಿರಬಹುದು ಎಂದು ಆರೋಪ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

ಡಿಸಿಐಬಿ ಪಿಡಬ್ಲ್ಯುಡಿ sand mafia officers


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ