ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ…

2nd puc exams from tomorrow in karnataka

28-02-2018

ಬೆಂಗಳೂರು: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್17ರವರೆಗೆ ನಡೆಯಲಿವೆ. ಒಟ್ಟು 1004 ಪರೀಕ್ಷಾ ಕೇಂದ್ರಗಳಲ್ಲಿ ಆರು ಲಕ್ಷ ತೊಂಬತ್ತು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಶ್ನೆ ಪತ್ರಿಕೆ ಮಾರುವುದು,ಕೊಳ್ಳುವುದು ಅಪರಾಧ. ಅಪರಾಧ ಸಾಬೀತಾದರೆ, ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸುವ ಅವಕಾಶವೂ ಇದೆ. 

ಪರೀಕ್ಷೆ ವೇಳೆ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್, ಮೊಬೈಲ್ ಹಾಗೂ ಗಡಿಯಾರ ಬಳಸುವಂತಿಲ್ಲ ಎಂದು ಎಚ್ಚರಿಸಲಾಗಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ ಅಡಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪಿಯು ಮಂಡಳಿಯ ಸಹಾಯವಾಣಿ ಸಂಖ್ಯೆ 080-23083900ಗೆ ಕರೆ ಮಾಡಿ ಗೊಂದಲ ಬಗೆಹರಿಸಿಕೊಳ್ಳಬಹುದಾಗಿದೆ. 286 ತಾಲ್ಲೂಕು ಮಟ್ಟದ ಹಾಗೂ 32 ಜಿಲ್ಲಾ ಮಟ್ಟದ ಜಾಗೃತದಳಗಳನ್ನು ನೇಮಿಸಲಾಗಿದ್ದು, ಕೆ.ಎಸ್.ಆರ್.ಟಿ.ಸಿ ಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

PUC Examination ಪ್ರಯಾಣ ವಿದ್ಯಾರ್ಥಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ