ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

school children protest for basic infastructure

28-02-2018

ಮೈಸೂರು: ಮೂಲ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ನೂರಿಪ್ಪತ್ತು ವಿದ್ಯಾರ್ಥಿಗಳು ಶಾಲೆ ಮುಂದೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಶೌಚಾಲಯ, ಆಟದ ಮೈದಾನ ಮತ್ತು ಗ್ರಂಥಾಲಯದ ವ್ಯವಸ್ಥೆ ಮಾಡಿಕೊಡಲು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಇದರ ಜೊತೆಗೆ, ಶಿಕ್ಷಕರ ಕೊರತೆಯನ್ನೂ ನಿವಾರಿಸಿಲು ಒತ್ತಾಯಿಸಿದ್ದಾರೆ. ಪೋಷಕರೂ ಕೂಡ ಮಕ್ಕಳೊಂದಿಗೆ ಪ್ರತಿಭಟನೆಗಿಳಿದಿದ್ದು, ಅಧಿಕಾರಿಗಳ ತಾತ್ಸಾರಕ್ಕೆ ಕಿಡಿಕಾರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Infrastructure school ಪೋಷಕ ಅಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ