ಬಿಜೆಪಿಯಲ್ಲಿ ಯಾತ್ರೆಗಳ ಪರ್ವ…

series of BJP yatras in karnataka

28-02-2018

ಮಡಿಕೇರಿ: ಈಗಾಗಲೇ ಪರಿವರ್ತನಾ ಯಾತ್ರೆ ಮುಗಿಸಿ, ನವಶಕ್ತಿ ಯಾತ್ರೆ ಆರಂಭಿಸಿರುವ ಬಿಜೆಪಿ, ಬೆಂಗಳೂರು ರಕ್ಷಾ ಯಾತ್ರೆಗೆ ಸಿದ್ಧವಾಗಿದೆ. ಇದರ ಜೊತೆಗೆ ಮೊತ್ತೊಂದು ಯಾತ್ರೆಗೂ ಸಜ್ಜಾಗುತ್ತಿದ್ದು, ಏಪ್ರಿಲ್ 3ರಿಂದ ಮಡಿಕೇರಿ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಮಾಹಿತಿ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಹಿಂದೂಗಳು ಹಾಗೂ ಬಿಜೆಪಿ-ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅಪ್ಪಚ್ಚು ರಂಜನ್ ದೂರಿದ್ದಾರೆ.

ಜನರಿಗೆ ದೈರ್ಯ ತುಂಬಲು ಜನ ಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 3ರಂದು ಕೊಡಗಿನ ಕುಶಾಲನಗರ ಹಾಗೂ ಉತ್ತರ ಕನ್ನಡದ ಅಂಕೋಲದಿಂದ ಯಾತ್ರೆ ಪ್ರಾರಂಭವಾಗಲಿದ್ದು, ಏಪ್ರಿಲ್ 6ರಂದು ಮಂಗಳೂರಿನಲ್ಲಿ ನಡೆಯುವ ಸಮಾರೋಪ ಸಮಾವೇಶದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗುವ  ಸಾಧ್ಯತೆಗಳಿವೆ ಎಂದು ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Appachu Ranjan BJP yatre ಸಂಘ ಪರಿವಾರ ಪ್ರಾರಂಭ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ