ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ

Bumper offer to state government employees

01-03-2018

ಬೆಂಗಳೂರು: 6ನೇ ವೇತನ ಆಯೋಗದ ಶಿಫಾರಸ್ಸಿಗೆ ಅನುಸಾರವಾಗಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ಅಂಕಿತ ಹಾಕಿದ್ದು, ಈ ಸಂಬಂಧದ ಅಧಿಕೃತ ಆದೇಶ ಇಂದು ಹೊರಬೀಳಲಿದೆ. ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ವೇತನ ಆಯೋಗದ ಶಿಫಾರಸುಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಶೇ.30ರಷ್ಟು ಹೆಚ್ವಳವಾಗಲಿದೆ. ಶನಿವಾರದ ಸಂಪುಟ ಸಭೆಯಲ್ಲಿ ಇದಕ್ಕೆ ಮಂಜೂರಾತಿ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲ ವೇತನಕ್ಕೆ ಶೇ.30ರಷ್ಟು ಫಿಟ್ಮೆಂಟ್ (ತಾರತಮ್ಯ ಸರಿದೂಗಿಸುವ ಮೊತ್ತ) ನೀಡಿ ವೇತನ ಪರಿಷ್ಕರಿಸಲಾಗಿದೆ. ಏಪ್ರಿಲ್ 1ರಿಂದಲೇ ನೌಕರರು ಪರಿಷ್ಕೃತ ವೇತನ ಪಡೆಯಲಿದ್ದಾರೆ. ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ, ಕನಿಷ್ಟ ಮೂಲ ವೇತನವನ್ನು 17,000 ರೂಪಾಯಿಗಳಿಗೆ ನಿಗದಿ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Govrnment employee ಕನಿಷ್ಟ ವೇತನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ