ಸೋಲಾರ್ ಪಾರ್ಕ್ ಉದ್ಘಾಟನೆ

Solar Park inauguration by cm siddaramaiah

01-03-2018

ತುಮಕೂರು: ಏಷ್ಯಾದ ಅತಿದೊಡ್ಡ ಸೋಲಾರ್ ಪಾರ್ಕಿನ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ. ಪಾವಗಡ ಬಳಿಯ ತಿರುಮಣಿಯಲ್ಲಿ ನಿರ್ಮಾಣವಾಗಿರುವ ಸೋಲಾರ್ ಪಾರ್ಕ್ ಮೊದಲ ಹಂತದಲ್ಲಿ 600 ಮೆಗಾವ್ಯಾಟ್ ವಿದ್ಯುತ್  ಉತ್ಪಾದಿಸಲಿದೆ. ಒಟ್ಟು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವುಳ್ಳ 10 ಸಾವಿರ ಕೋಟಿ ರೂ. ವೆಚ್ಚದ ಸೋಲಾರ್ ಪಾರ್ಕನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಚಿವ ಜಯಚಂದ್ರ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

solar park pavagada ಇಂಧನ ಡಿ.ಕೆ.ಶಿವಕುಮಾರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ