ಬರೀ ರಾಜಕೀಯ ಮಾತಾಡ್ತಾರೆ..! 01-03-2018

ಹುಬ್ಬಳ್ಳಿ: ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚೆ ಮಾಡುವುದು ಬಿಟ್ಟು ಬೇರೆ ವಿಚಾರ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಜೆಡಿಎಸ್ ರಾಜ್ಯಾದ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ಕಿಡಿಕಾರಿದ್ದಾರೆ. ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ನಂಬಿಕೆ ಇದೆ, ನಾನು ಪೊಲೀಸರ ರಕ್ಷಣೆಯಲ್ಲಿ ಹಳ್ಳಿಹಳ್ಳಿಗೆ ಹೋಗುತ್ತಿಲ್ಲ ಎಂದು ಬಿಜೆಪಿ, ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

ಗ್ರಾಮೀಣ ಭಾಗದ ಜನರು ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗುತ್ತಿದ್ದಾರೆ. ನಮ್ಮ ಕಾರ್ಯಕ್ರಮಕ್ಕೆ ಸೀರೆ, ಬೆಳ್ಳಿ, ಹಣ ಕೊಟ್ಟು ಜನರನ್ನು ಕರೆತರುತ್ತಿಲ್ಲ. ರಾಷ್ಟ್ರೀಯ ಪಕ್ಷಗಳು ಆಮಿಷ ಒಡ್ಡಿ ಜನರನ್ನು ಕರೆದುಕೊಂಡು ಬರುತ್ತಿದ್ದಾರೆ ಎಂದು ಕುಮಾರ ಸ್ವಾಮಿ ದೂರಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಮುಂದಾಗಲಿಲ್ಲ, ಈಗ ರೈತರ ಹೆಸರಲ್ಲಿ ಸಮಾವೇಶ ಮಾಡುತ್ತಿದ್ದಾರೆ, ಯಡಿಯೂರಪ್ಪನವರು ನಿಜಕ್ಕೂ ರೈತ ಬಂಧುವೇ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡಬೇಕು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ