ಸರ್ಕಾರಿ ವೆಚ್ಚದಲ್ಲಿ ರಾಜಕೀಯ ಕಾರ್ಯಕ್ರಮ? 

Political Program with Government Expenditure

01-03-2018

ಬೆಂಗಳೂರು: ಕಾಂಗ್ರೆಸ್ ಪಕ್ಷ ಸರ್ಕಾರದ ಹಣದಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿದೆ ಎಂದು ಆರೋಪಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಶಶಿಧರ್ ಶೆಟ್ಟಿ ಎನ್ನುವವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಮೂವರು ಸಚಿವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮಂಗಳೂರು ಮೂಲದ ಶಶಿಧರ್ ಶೆಟ್ಟಿ, 2017ರಲ್ಲಿ ಬಂಟ್ವಾಳದಲ್ಲಿ ನಡೆದಿದ್ದ ಸರ್ಕಾರಿ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ, ಜಿಲ್ಲಾಡಳಿತ ಲಕ್ಷಾಂತರ ಹಣ ದುಂದು ವೆಚ್ಚ ಮಾಡಿದೆ ಎಂದು ದೂರಿದ್ದಾರೆ.

ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ರಮಾನಾಥ್ ರೈ ಮತ್ತು ಯು.ಟಿ.ಖಾದರ್ ರಾಜಕೀಯ ಭಾಷಣ ಮಾಡಿದ್ದಾರೆ. ಸರ್ಕಾರಿ ಕಾರ್ಯಕ್ರಮವನ್ನು ಚುನಾವಣಾ ಭಾಷಣಕ್ಕೆ ಬಳಸಿಕೊಳ್ಳಲಾಗಿದೆ ಎಂದು ಶಶಿಧರ್ ಶೆಟ್ಟಿ ಆರೋಪಿಸಿದ್ದಾರೆ. ಈ ಕುರಿತು ಭಾಷಣದ ಸಿಡಿ ಮತ್ತು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಸರ್ಕಾರಿ ವೆಚ್ಚದ ದಾಖಲೆ ಸಹಿತ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Governor RTI ಭಾಷಣ ಸರ್ಕಾರಿ ಬಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ