ಮೋದಿ ಆಹ್ವಾನ ತಿರಸ್ಕರಿಸಿದ ಖರ್ಗೆ..!

kharge denied invitation to Modi

01-03-2018

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಲೋಕ್‍ಪಾಲ್ ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಲೋಕ್‍ಪಾಲ್ ಆಯ್ಕೆ ಸಮಿತಿ ಸಭೆಗೆ ಕೇವಲ ನಮ್ಮನ್ನು ವಿಶೇಷ ಆಹ್ವಾನಿತರನ್ನಾಗಿ ಆಮಂತ್ರಿಸಿದ್ದು, ಇದು ಸರಿಯಲ್ಲ. ಲೋಕ್ ಪಾಲ್ ಕಾಯ್ದೆಗೆ ವಿರುದ್ಧವಾಗಿದೆ. ತಮಗೆ ಅಧಿಕೃತ ಆಹ್ವಾನ ಕೊಡಬೇಕಾಗಿತ್ತು. ಆದರೆ ವಿಶೇಷ ಆಹ್ವಾನಿತರಾಗಿ ಕರೆದು ತಮ್ಮ ಧ್ವನಿಯನ್ನು ಅಡಗಿಸುವ ಪ್ರಯತ್ನವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 2013ರ ಲೋಕ್‍ಪಾಲ್ ಮತ್ತು ಲೋಕಾಯುಕ್ತ ಕಾಯ್ದೆ ಪ್ರಕಾರ ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಯ್ಕೆ ಸಮಿತಿಯ ಸದಸ್ಯರಾಗಿರುತ್ತಾರೆ. ಆದರೆ ಕೇಂದ್ರ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mallikarjun kharge Lokpal ಗಂಭೀರ ಲೋಕಾಯುಕ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ